ದಾವಣಗೆರೆ : ಮಧ್ಯಾಹ್ನದ ವೇಳೆ ಶಾಲಾ ಮೈದಾನದಲ್ಲಿಯೇ ವಿದ್ಯಾರ್ಥಿಗಳಿಬ್ಬರು ಲಿಪ್ ಲಾಕ್ ಮಾಡಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಾವಣಗೆರೆಯಲ್ಲಿ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಬ್ಬರು ಶಾಲಾ ಮೈದಾನದಲ್ಲಿ ಸಮವಸ್ತ್ರದಲ್ಲಿಯೇ ಕುಳಿತು ಸಾರ್ವಜನಿಕವಾಗಿ ಲಿಪ್ ಲಾಕ್ ಮಾಡಿದ್ದಾರೆ. ಈ ದೃಶ್ಯವನ್ನು ಸಾರ್ವಜನಿಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದು, ಇದು ಈಗ ಸಖತ್ ವೈರಲ್ ಆಗಿದೆ. ಈ ವಿಡಿಯೋ ನೋಡಿದವರು ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.