ತುಮಕೂರು : ಮಾಜಿ ಪ್ರಧಾನಿ ದೇವೇಗೌಡರಿಗೆ ಗಂಗೆ ಶಾಪವಿರುವುದರಿಂದ ಅವರು ತುಮಕೂರಿನಿಂದ ಸ್ಪರ್ಧೆ ಮಾಡಿದರೆ ಅವರ ಸೋಲು ಗ್ಯಾರಂಟಿ ಎಂದು ತುಮಕೂರು ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮಾಜಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸುರೇಶ್ ಗೌಡರು, ದೇವೇಗೌಡರಿಗೆ ಗಂಗೆ ಶಾಪ ಇರೋದಾಗಿ ಈಗಾಗಲೇ ಜ್ಯೋತಿಷಿಗಳು ಹೇಳಿದ್ದಾರೆ. ಈ ವಿಚಾರ ಸ್ವತಃ ದೇವೇಗೌಡರಿಗೆ ಗೊತ್ತು. ಈ ಶಾಪ ಹೊತ್ತುಕೊಂಡು ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಿದರೆ ಅವರ ಸೋಲು