ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೂಡಲೇ ಮುಷ್ಕರ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಅಧಿವೇಶನದಲ್ಲಿ ಕೆಪಿಎಂಇ ಮಸೂದೆ ಮಂಡಿಸಿಲ್ಲ. ಸರ್ವಪಕ್ಷಗಳೊಂದಿಗೆ ಮತ್ತು ವೈದ್ಯರೊಂದಿಗೆ ಚರ್ಚೆ ನಡೆಸಿದ ನಂತರವಷ್ಟೆ ಮಂಡನೆಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ಖಾಸಗಿ ವೈದ್ಯರೊಂದಿಗೆ ನಡೆದ ಚರ್ಚೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇನೆ. ಯಾವುದೇ ಕಾರಣಕ್ಕೂ ನಿಮಗೆ ಮಾಹಿತಿ ನೀಡದೆ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸುವುದಿಲ್ಲ