ಬೆಂಗಳೂರು: ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿಯಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರು ನಾನೇ ಮುಂದಿನ ನಾಯಕ ಎಂದು ಬಿಂಬಿಸಿಕೊಳ್ಳುವುದು ಸಾಮಾನ್ಯ. ಆದರೆ ಹಾಗೆ ಮಾಡಿದರೆ ಜೋಕೆ ಎಂದು ಕಾಂಗ್ರೆಸ್ ನಾಯಕರಿಗೆ ರಾಜ್ಯ ಉಸ್ತುವಾರಿ ವೇಣುಗೋಪಾಲ್ ತಾಕೀತು ಮಾಡಿದ್ದಾರೆ. ಹಾಲಿ ಸಚಿವರು ಮತ್ತು ಶಾಸಕರೂ ಸೇರಿದಂತೆ ಕಾಂಗ್ರೆಸ್ ನಾಯಕರು ಮುಂದಿನ ಅಭ್ಯರ್ಥಿ ನಾನೇ ಎಂದು ಬಹಿರಂಗವಾಗಿ ಹೇಳಿಕೊಳ್ಳುವಂತಿಲ್ಲ. ಯಾರಿಗೂ ಟಿಕೆಟ್ ಕೊಡುವ ಭರವಸೆ ಕೊಡುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ.ಕಳೆದ