ಮಂಗಳೂರು: ಪ್ರತಿಪಕ್ಷದವರಿಗೆ ಸರ್ಕಾರ, ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲು ಯಾವುದೇ ಕಾರಣವಿಲ್ಲ. ಆದರೂ ಬಿಜೆಪಿಯವರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಐದು ವರ್ಷದ ಆಡಳಿತದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿ ಸರ್ವರ ಪ್ರೀತಿಗೆ ಪಾತ್ರವಾಗಿದೆ. ಹೀಗಾಗಿ ಈ ಅಪಪ್ರಚಾರಕ್ಕೆ ಜನರು ಮಾನ್ಯತೆ ನೀಡುವುದಿಲ್ಲ. ಪ್ರತಿ ವಿಚಾರಕ್ಕೆ ಕೆ.ಜೆ. ಜಾರ್ಜ್ ರಾಜೀನಾಮೆ ಕೇಳಿ ಜನರಲ್ಲಿ ತಪ್ಪು ಅಭಿಪ್ರಾಯ