ನವದೆಹಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಸೋಮವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಮಮಂದಿರ ನಿರ್ಮಾಣ ಆಗಿದೆ. ರಾಮಮಂದಿರ ನಿರ್ಮಾಣದ ವಿಷಯವನ್ನು ಮನಸಿನಲ್ಲಿ ಇಟ್ಟುಕೊಂಡು ಯಾರೂ ಮತ ಚಲಾಯಿಸಬಾರದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿಕೆ ನೀಡಿದ್ದಾರೆ.ಜೊತೆಗೆ, ಬಾಲ್ಯದಿಂದಲೂ ರಾಮನ ಬಗ್ಗೆ ನಾನು ಒಲವು ಹೊಂದಿದ್ದೇನೆ. ಬಿಜೆಪಿಗೆ ರಾಮನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ನುಡಿದ ತರೂರ್, ನನ್ನ ರಾಮನನ್ನು ಬಿಜೆಪಿಯವರಿಗೆ ಒಪ್ಪಿಸುವುದಿಲ್ಲ ಎಂದು ಹೇಳಿದ್ದಾರೆ.