Widgets Magazine

ಡೊನಾಲ್ಡ್ ಟ್ರಂಪ್ ಭೇಟಿ ವೇಳೆಯಲ್ಲೇ ದೆಹಲಿಯಲ್ಲಿ ನಿಷೇಧಾಜ್ಞೆ

ನವದೆಹಲಿ| Jagadeesh| Last Modified ಮಂಗಳವಾರ, 25 ಫೆಬ್ರವರಿ 2020 (19:07 IST)
ಭಾರತಕ್ಕೆ ಎರಡು ದಿನಗಳ ಪ್ರವಾಸವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡಿರೋ ಸಮಯದಲ್ಲೇ ದೆಹಲಿಯಲ್ಲಿ ಘರ್ಷಣೆ ಭುಗಿಲೆದ್ದಿದ್ದು ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ.

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಪರವಾಗಿ ನಡೆಯುತ್ತಿರುವ ಗಲಭೆಯಲ್ಲಿ 7 ಜನರು ಬಲಿಯಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹಿಂಸಾಚಾರ ಅಲ್ಲಲ್ಲಿ ಮುಂದುವರಿದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಡ್ತಿದ್ದಾರೆ.

ಮಾರುಕಟ್ಟೆಯಲ್ಲಿ ಹಲವು ಅಂಗಡಿ, ಪೆಟ್ರೊಲ್ ಬಂಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಹಲವಾರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.


ಇದರಲ್ಲಿ ಇನ್ನಷ್ಟು ಓದಿ :