ಬಿಜೆಪಿಯ ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಹುಷಾರ್ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಂಸದೆ ಶೋಭಾ ಕರಂದ್ಲಾಜೆ ಧಮಕಿ ಹಾಕಿದ್ದಾರೆ. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯನ್ನು ವಿರೋಧಿಸಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದೆ ಶೋಬಾ ಕರಂದ್ಲಾಜೆ, ನಾವು ಮೀಟಿಂಗ್ ಕರೆದರೆ ಸ್ಥಳಕ್ಕೆ ಬರುವುದಿಲ್ಲ. ನೀವೇನು ಸರಕಾರದ ಎಸ್ಪಿಯೋ ಅಥವಾ ಕಾಂಗ್ರೆಸ್ ಪಕ್ಷದ ಎಸ್ಪಿಯೋ