ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆಯ ಬಗ್ಗೆ ಇದೀಗ ದೋಸ್ತಿ ಸರ್ಕಾರದ ಕಾಂಗ್ರೆಸ್ ಸಚಿವರು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ. ಸಚಿವರು, ಸಿಎಂ ಸ್ಥಾನದಲ್ಲಿದ್ದುಕೊಂಡು ಈ ರೀತಿಯ ಹೇಳಿಕೆ ಕೊಟ್ಟಿರುವುದು ಸರಿಯಲ್ಲ. ವಿರೋಧ ಪಕ್ಷದವರು ಏನೇ ಹೇಳಲಿ, ಸಿಎಂ ಸ್ಥಾನದಲ್ಲಿರುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಆದರೆ, ಕುಮಾರಸ್ವಾಮಿ ದಂಗೆ ಪದ ಬಳಕೆ ಮಾಡಿದ್ದು, ಒಪ್ಪುವಂತಹದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕಾನೂನು ಸುವ್ಯವಸ್ಥೆ