ಡಬಲ್ ಇಂಜಿನ್ ಸರ್ಕಾರವೆಂದರೆ, ಡಬಲ್ ಅಭಿವೃದ್ಧಿ ಮತ್ತು ಅಭಿವೃದ್ಧಿಯ ವೇಗ ಹೆಚ್ಚಿಸುವುದೇ ಆಗಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ಎಂಬುದು ಕೇವಲ ಘೋಷಣೆಯಲ್ಲ. ಡಬಲ್ ಇಂಜಿನ್ ಸರ್ಕಾರವೆಂದರೆ ಅಭಿವೃದ್ಧಿಯ ವೇಗ, ಅಭಿವೃದ್ಧಿಯ ಪ್ರಮಾಣವಾಗಿದೆ. ರಾಜ್ಯಗಳ ಸಮನ್ವಯದೊಂದಿಗೆ ಆರ್ಥಿಕತೆ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಸುಧಾರಿಸುವತ್ತ ಕೇಂದ್ರ ಸರ್ಕಾರ ಒತ್ತು ನೀಡುತ್ತಿದೆ.ಕಳೆದ ಮೂರುವರೆ ವರ್ಷದಲ್ಲಿ