ಸಮ್ಮಿಶ್ರ ಸರ್ಕಾರದ ಪತನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾತ್ರ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ