ಬೆಂಗಳೂರು : ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತು ಕೇಳಿಬರುತ್ತಿತ್ತು. ಈ ನಡುವೆ ಇದೀಗ ಡಾ.ಕೆ.ಸುಧಾಕರ್ ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ನನಗೆ