ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ವಾರ್ಡ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ಮತದಾರರ ಪಟ್ಟಿ ಪರಿಶೀಲಿಸಲು ಅವಕಾಶ ನೀಡಲಾಗಿದೆ. ತಮ್ಮ ಮೊಬೈಲ್ನಲ್ಲಿ VHA ಆ್ಯಪ್ ಅಥವಾ NVSP ವೆಬ್ಸೈಟ್ ಮೂಲಕ ಮಾಹಿತಿ ಪಡೆಯಬಹುದಾಗಿದೆ. e-EPIC download