ಧಾರಾಕಾರವಾಗಿ ಸುರಿದ ಮಳೆಗೆ ಮನೆಗೆ ಕೊಳಚೆ ನೀರು ನುಗ್ಗಿರುವುದು ವರದಿಯಾಗುತ್ತಿದ್ದಂತೆ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಚಿವ ಜಾರ್ಜ್ ಸ್ವಕ್ಷೇತ್ರದಲ್ಲಿಯೇ ಮನೆಗಳಿಗೆ ಕೊಳಚೆ ನೀರು ನುಗ್ಗಿದ್ದರಿಂದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದರು. ಜನತೆಯ ಆಕ್ರೋಶ ತಿಳಿಯುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಆಗಮಿಸಿದ ಸಟಿವ ಜಾರ್ಜ್ ಕೊಳಚೆ ನೀರಿನಲ್ಲಿಯೇ ನಡೆದು ಸ್ಥಳೀಯರ ಮನವಿಗೆ ಸ್ಪಂದಿಸಿದರು. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ರಾಜಕಾಲುವೆಯ ಕೊಳಚೆ ನೀರು