ಮಹಾದಾಯಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಾಟಕವಾಡುತ್ತಿದ್ದು, ಸುಳ್ಳು ಭರವಸೆ ನೀಡಿದ ಯಡಿಯೂರಪ್ಪ ಈಗ ರೈತರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ಯಡಿಯೂರಪ್ಪ ಮತ್ತು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಾಟಕ ಬಯಲಾಗಿದೆ. ವಿವಾದ ಬಗೆಹರಿಸುವುದಾಗಿ ಅವರು ಸುಳ್ಳು ಭರವಸೆ ನೀಡಿದ್ದರು. ಆದರೆ, ವಿವಾದ ಬಗೆಹರಿದಿಲ್ಲ. ಇದರಿಂದ ಯಡಿಯೂರಪ್ಪ ರೈತರ