ಮಂಗಳೂರು : 2020ರಲ್ಲಿ ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯದ ಪೋಕ್ಸೋ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಕ್ಕೆ ಹೆಚ್ಚುವರಿಯಾಗಿ 5 ಸಾವಿರ ರೂ. ದಂಡ ಹಾಗೂ ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.ಕಳೆದ ವರ್ಷ