ಬೆಂಗಳೂರು ಟೆಕ್ ಸಮ್ಮಿಟ್ಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಆರಂಭಗೊಂಡಿದ್ದು, ಏಷ್ಯಾ ಖಂಡದಲ್ಲೇ ಮಹತ್ವದ ಕಾರ್ಯಕ್ರಮವೆಂದು ಹೆಸರಾಗಿರುವ ಈ ತಂತ್ರಜ್ಞಾನ ಸಮಾವೇಶ ಬೆಂಗಳೂರು ಅರಮನೆ ಮೈದಾನದಲ್ಲಿ 3 ದಿನಗಳ ಕಾಲ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಮುರುಗೇಶ್ ಆರ್ ನಿರಾಣಿ, ಬಯೋಟೆಕ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಸಂಯುಕ್ತ ಅರಬ್ ಸಂಸ್ಥಾನದ