ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ.27ರಂದು ಶಿಗ್ಗಾವಿ ಕ್ಷೇತ್ರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಿ ಶಿಷ್ಟಾಚಾರದಂತೆ ಕಾರ್ಯಕ್ರಮ ಸಿದ್ಧತೆ ಮಾಡಿಕೊಳ್ಳುವಂತೆ ಇಲಾಖಾ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಸೂಚನೆ ನೀಡಿದರು. ಮುಖ್ಯಮಂತ್ರಿ ಪ್ರವಾಸದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಾಗಿ ಗುರುವಾರ ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಶಿಗ್ಗಾವಿ ಕ್ಷೇತ್ರ ವ್ಯಾಪ್ತಿಯ ಮೂರು ಕಾಮಗಾರಿಗಳ