ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ವಿಪಕ್ಷದ ನಾಯಕರು ದೂರುತ್ತಿರುವ ಬೆನ್ನಲ್ಲೇ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಸಿಎಂ, ಡಿಸಿ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ, ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು 100 ತಾಲ್ಲೂಕುಗಳಲ್ಲಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವುದು ಸೇರಿದಂತೆ ಆಡಳಿತಕ್ಕೆ ಸಂಬಂಧಿಸಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್