ಬರಪ್ರವಾಸ ಚುನಾವಣೆ ಗಿಮಿಕ್ ಎನ್ನುವವರು ಮೂರ್ಖರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗದಗನ ಅಂಬೇಡ್ಕರ್ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಆದರೆ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬರಗಾಲವೇ ಇಲ್ಲ ಎನ್ನುತ್ತಾ ತಿರುಕನ ಹೇಳಿಕೆ ನೀಡುತ್ತಿದ್ದಾರೆ ಎಂದು ಗುಡುಗಿದರು. ಮಹಾದಾಯಿ ಯೋಜನೆಗಾಗಿ ಸುದೀರ್ಘ ಹೋರಾಟ ಮಾಡಿದ್ದೇನೆ. ನಾನು ಸಿಎಂ ಆಗಿದ್ದಾಗ ಮಹದಾಯಿ ಯೋಜನೆಗೆ ಹಣ