ಮೈಸೂರು,ಸೆ.15 : ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳು ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದು, ನಾಳೆ ಅರಮನೆ ಪ್ರವೇಶಿಸಲಿವೆ. ಕೋವಿಡ್ ಸೋಂಕು ಹರಡುವ ಭೀತಿ ಹಾಗೂ ಭದ್ರತೆ ದೃಷ್ಟಿಯಿಂದ ಆನೆ ವೀಕ್ಷಣೆಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಅರಣ್ಯ ಭವನದ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಪ್ರತಿಯೊಬ್ಬ ರನ್ನೂ ವಿಚಾರಿಸಿದ ನಂತರವಷ್ಟೇ ಒಳಗೆ ಬಿಡಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಮಾವುತರು, ಕಾವಾಡಿಗರು ಹಾಗೂ ಅವರ ಸಹಾಯಕರು, ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.