ಬೆಂಗಳೂರು: ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ನೆರೆ ಪರಿಹಾ ವಿಚಾರದಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ್ದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಈಗ ತಮ್ಮ ಪಕ್ಷದ ಬೆಂಬಲಿಗರಿಂದಲೇ ಟೀಕೆಗೊಳಗಾಗಿದ್ದಾರೆ.ಚಕ್ರವರ್ತಿ ಸೂಲಿಬೆಲೆ ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಮತ್ತು ಪ್ರಧಾನಿ ಮೋದಿ ಆಸಕ್ತಿ ತೋರುತ್ತಿಲ್ಲ ಎಂದಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಸದಾನಂದ ಗೌಡರು ಹಾರಿಕೆಯ ಸುದ್ದಿ ಹರಡುವವರು ದೇಶದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದರು ಎಂದು ಪರೋಕ್ಷವಾಗಿ