ಕಾಂಗ್ರೆಸ್ ನಾಯಕರನ್ನು ಟೀಕಿಸುವ ಭರದಲ್ಲಿ ಕೇಂದ್ರಸಚಿವ ಡಿ.ವಿ.ಸದಾನಂದಗೌಡ, ಪ್ರಧಾನಿ ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿ ಅಚ್ಚರಿಗೆ ಕಾರಣರಾಗಿದ್ದಾರೆ. ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎನ್ನುವ ಬದಲಿಗೆ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು ಎಂದು ಬಾಯಿತಪ್ಪಿ ವಾಗ್ದಾಳಿ ನಡೆಸಿದರು. ತಪ್ಪಿನ ಅರಿವಾದಾಗ ಕಾಲ ಮಿಂಚಿತ್ತು. ನಿನ್ನೆ ಶ್ರೀರಾಮುಲು ಯಡವಟ್ಟು ಮಾಡಿಕೊಂಡಿದ್ದರೆ ಇಂದು ಬಂಟ್ವಾಳದ ಪರಿವರ್ತನಾ ಯಾತ್ರೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಯಡವಟ್ಟು ಮಾಡಿಕೊಂಡಿದ್ದಾರೆ.