ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಿಐಡಿಯ ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಗೆಳೆಯನ ಮನೆಯಲ್ಲಿ ರಾತ್ರಿ ಪಾರ್ಟಿ ಮಾಡಿದ್ದ ಲಕ್ಷ್ಮೀ ಬಳಿಕ ಅಲ್ಲಿಯೇ ಕೊಠಡಿಯೊಂದರಲ್ಲಿ ನೇಣು ಹಾಕಿ ಜೀವಕೊನೆಗಾಣಿಸಿದ್ದಾರೆ.ಇವರ ಆತ್ಮಹತ್ಯೆಯ ಹಿಂದಿನ ಕಾರಣಗಳ ಬಗ್ಗೆ ಈಗ ಭಾರೀ ಚರ್ಚೆಯಾಗುತ್ತಿದೆ. 2012 ರಲ್ಲಿ ನವೀನ್ ಎಂಬಾತನನ್ನು ಮದುವೆಯಾಗಿದ್ದ ಲಕ್ಷ್ಮೀ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮದುವೆಯಾಗಿ 8 ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಇದರಿಂದ ದಂಪತಿ ನಡುವೆ ವೈಮನಸ್ಯವೂ ಇತ್ತು.