ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ನೊಂದಣಿ ಮಾಡಿಕೊಂಡು ಇ-ಪಾಸ್ ಹೊಂದಿರಬೇಕಾಗುತ್ತದೆ. ಕೋವಿಡ್- 19 ಸೋಂಕು ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು, ಮೇ 31 ರವರೆಗೆ ಸಂಜೆ 6 ರಿಂದ ಬೆಳಗಿನ 7 ಗಂಟೆವರೆಗೆ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಹೇಳಿದ್ದಾರೆ.ಹೊರ ರಾಜ್ಯದಿಂದ ಜಿಲ್ಲೆಗೆ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ನೊಂದಣಿ ಮಾಡಿಕೊಂಡು ಇ-ಪಾಸ್ ಹೊಂದಿರಬೇಕಾಗುತ್ತದೆ.