ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ ದಾಳಿ ಮಾಡಿದೆ. ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಆ