ಕೊಡಗಿನಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿರುವುದು ಬೆಳಕಿಗೆ ಬಂದಿದೆ. ಕೊಡಗಿನ ಗಡಿಯಲ್ಲಿ ಗುರುವಾರ ಮಧ್ಯರಾತ್ರಿ ಮತ್ತೆ 2 ಬಾರಿ ಭೂಮಿ ಕಂಪಿಸಿದೆ.ಕಳೆದ ರಾತ್ರಿ ಸುಮಾರು 1 ಗಂಟೆ ಅವಧಿಯಲ್ಲಿ ಸಂಪಾಜೆ, ಪೆರಾಜೆ, ಗೂನಡ್ಕ, ಕರಿಕೆ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನವಾಗಿದೆ. 1.8 ಮ್ಯಾಗ್ನಿಟ್ಯೂಡ್ನಲ್ಲಿ ಕಂಪನದ ತೀವ್ರತೆ ದಾಖಲಾಗಿದ್ದು, ಗ್ರಾಮದಲ್ಲಿ ದೊಡ್ಡ ಶಬ್ದ ಎರಡು ಬಾರಿಯೂ ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.ಕಳೆದ ಒಂದು ವಾರದ ಅವಧಿಯಲ್ಲಿ 5 ಬಾರಿ ಭೂಮಿ ಕಂಪಿಸಿದ್ದು ಜನರಲ್ಲಿ ಆತಂಕ ಮೂಡಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.ಇದೇ ವೇಳೆ ಭೂಕಂಪನವಾಗಿರುವುದು ಮೊದಲೇ ಆತಂಕದಲ್ಲಿದ್ದ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.