ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಹಿಸಿಕೊಂಡ ನಾಲ್ಕು ವರ್ಷಗಳ ಅವಧಿಯಲ್ಲಿ ಸರಕಾರದ ಸಾಧನೆ ಶೂನ್ಯವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ರಾಮಯ್ಯ ಸರಕಾರಕ್ಕೆ ನೀರಾವರಿ ಬಗ್ಗೆ ಆಸಕ್ತಿಯಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬರಗಾಲದಿಂದ ತತ್ತರಿಸಿರುವ ರೈತರಿಗೆ ಪರಿಹಾರ ಕೊಡುವ ಸೌಜನ್ಯ ಕೂಡಾ ಸರಕಾರ ತೋರಿಲ್ಲ ಎಂದು ಕಿಡಿಕಾರಿದರು. ಕಾಟಾಚಾರಕ್ಕೆ ಸರಕಾರ ಬಜೆಟ್ ಮಂಡಿಸಿದೆ. ನೀರಾವರಿ ಯೋಜನೆಗಳ ಬಗ್ಗೆ ಸರಕಾರ ದಿವ್ಯ