ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪ್ರೌಢಶಾಲೆಗೆ ಈಸ್ಟರ್ನ್ ಕ್ಯಾಂಡಿಮೆಂಟ್ ಸಂಸ್ಥೆ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿಯಲ್ಲಿ ೧೦ ಕಂಪ್ಯೂಟರ್ ಗಳನ್ನು ಉಚಿತವಾಗಿ ದೇಣಿಗೆ ನೀಡಿದೆ. ಶಾಲೆಯಲ್ಲಿ ಅಳವಡಿಸಿರುವ ನೂತನ ಕಂಪ್ಯೂಟರ್ ಪ್ರಯೋಗಾಲಯವನ್ನು ಈಸ್ಟರ್ನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಫೀರೋಜ್ ಮೀರನ್ ಬುಧವಾರ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈಸ್ಟರ್ನ್ ಭೂಮಿಕಾ ಮೂಲಕ ಸಂಸ್ಥೆ ಸಾಮಾಜಿಕ ಜವಾಬ್ದಾರಿ ನಿರ್ವಹಿಸುವ ಕಾರ್ಯ ಮಾಡುತ್ತಿದ್ದೇವೆ. ಸಂಸ್ಥೆಯ