ಜಾರಿ ನಿರ್ದೇಶನಾಲಯ ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಬುಧವಾರ ಮಾಧ್ಯಮದ ಜತೆ ಮಾತನಾಡಿದ ಅವರು; ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ ಇರುತ್ತವೆ. ಅರ್ಧ ಗಂಟೆಯಲ್ಲೇ ಎಲ್ಲಾ ವಿಚಾರಣೆ ಮಾಡಿ ಮುಗಿಸಬಹುದು ಎಂದು ಅಭಿಪ್ರಾಯಪಟ್ಟರು.