ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ಬೃಹತ್ ಶೋಧ ಕಾರ್ಯಚರಣೆ ಎರಡನೇ ದಿನವೂ ಮುಂದುವರಿದಿದೆ. ದಾಳಿಯ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಬೆಂಗಳೂರಿನ ಸಚಿವರ ಮನೆಗಳ ಮುಂದೆ ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಡಿ ಅಧಿಕಾರಿಗಳ ತಂಡವು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಯೋಧರ ಭದ್ರತೆಯೊಂದಿಗೆ ಸುಮಾರು 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ