ರಾಜ್ಯದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಚಿವ ಸುರೇಶ್ ಕುಮಾರ್ ಅವರಲ್ಲಿ ರೋಗದ ಲಕ್ಷಣ ಕಾಣಿಸಿಕೊಂಡಿವೆ ಎನ್ನಲಾಗಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.