ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಹಗುರವಾಗಿ ಕಾಣುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ತರಲು ಯತ್ನ ನಡೆದಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರವಿದೆ. ಆದರೆ, ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ ರಾಷ್ಟ್ರೀಯ ಪಕ್ಷಗಳು ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತವೆ. ರಾಜ್ಯಗಳ ಹಿತಾಸಕ್ತಿಯನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳಸಾ