ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಬದಲಾವಣೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ