ಮೊಟ್ಟೆ ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ, ಬಹುತೇಕರು ಮೊಟ್ಟೆ ತಿನ್ನೋರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ನಗರವೊಂದರಲ್ಲೇ ಮೊಟ್ಟೆಯಿಂದ ಕೋಟ್ಯಂತರ ರೂಪಾಯಿ ವಹಿವಾಟು ಪ್ರತಿನಿತ್ಯ ನಡೆಯುತ್ತದೆ. ಅಂತಹದ್ದರಲ್ಲಿ ಮೊಟ್ಟೆಗೂ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿ ಮೊಟ್ಟೆಯ ಬೆಲೆ ಏರಿಕೆಯಾಗಿದ್ದು, ಮೊಟ್ಟೆ ಪ್ರಿಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕೋಳಿಗಳಿಗೆ ನೀಡುವ ಆಹಾರದ ಬೆಲೆ ಏರಿಕೆಯಾದ ಪರಿಣಾಮ ಸಹಜವಾಗಿಯೇ ಮೊಟ್ಟೆಗಳು ದುಬಾರಿ ಎನಿಸಿವೆ. 2021ರ ಜನವರಿಯಲ್ಲಿ 100 ಮೊಟ್ಟೆಗಳ ಒಂದು ಬ್ಯಾಚ್ಗೆ