ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಜೂನ್ 20ರಂದು ಚುನಾವಣೆ ನಡೆಯಲಿದೆ. ಧಾರವಾಡ ಪಾಲಿಕೆಯ ಸ್ವಾತಂತ್ರ್ಯ ಅಮೃತಮಹೋತ್ಸವ ಸಭಾಭವನದಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿರಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆ ನಡೆಯಲಿದೆ.22ನೇ ಅವಧಿಯ ಹು-ಧಾ ಪಾಲಿಕೆ ಚುನಾವಣೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ,