ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂಬುದು ಒಮ್ಮತದ ತೀರ್ಮಾನವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸರ್ವಪಕ್ಷಗಳ ನಾಯಕರ ಸಭೆಯ ನಂತರ ಮಾಧ್ಯಮದವರೊಂದಿಗೆ ಬೊಮ್ಮಾಯಿ ಅವರು ಮಾತನಾಡಿದರು.ಈ ವೇಳೆ ಅವರು, ಎಲ್ಲ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ