ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಲುವಾಗಿ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ವಿಧಾನಸಭಾ ಚುನಾವಣೆಯಲ್ಲಿ 214 ಕ್ಷೇತ್ರಗಳಲ್ಲಿ ಇಪ್ಪತ್ತು ಕ್ಷೇತ್ರಗಳನ್ನು ಬಿಎಸ್ಪಿಗೆ ಬಿಟ್ಟುಕೊಡುವಂತೆ ನಿರ್ಧಾರ ಮಾಡಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಬಿಎಸ್ಪಿಯಿಂದ ಬೆಂಬಲ ಸಿಗಲಿದೆ. ಮೈತ್ರಿ