Widgets Magazine

ಜಿಪಂ. ತಾಪಂ ಫಲಿತಾಂಶ ನಿರಾಶಾದಾಯಕವಲ್ಲ: ದೇವೇಗೌಡ

ಮೈಸೂರು| Rajesh patil| Last Modified ಮಂಗಳವಾರ, 23 ಫೆಬ್ರವರಿ 2016 (20:45 IST)
ಜಿಪಂ, ತಾಪಂ ನಿರಾಶಾದಾಯಕವಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಅನಾರೋಗ್ಯದಿಂದಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಚುನಾವಣೆ ಫಲಿತಾಂಶದಲ್ಲಿ ಸ್ವಲ್ಪ ಏರುಪೇರಾಗಿದೆ. ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲು ಜೆಡಿಎಸ್ ಅಸ್ತಿತ್ವ ಉಳಿಸಿಕೊಂಡಿದೆ ಎಂದರು.

ಮುಂಬರುವ ದಿನಗಳಲ್ಲಿ ಕುಮಾರಸ್ವಾಮಿಯವರೊಂದಿಗೆ ರಾಜ್ಯದಲ್ಲಿ ಪ್ರವಾಸ ಮಾಡಿ, ಜೆಡಿಎಸ್ ಪಕ್ಷವನ್ನು ಮತ್ತೆ ಸಂಘಟಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ಜೆಡಿಎಸ್ ಪಕ್ಷ ಎರಡು ಜಿಲ್ಲೆಗಳ ಜಿಲ್ಲಾ ಪಂಚಾಯಿತಿಗಳಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ಬಹುಮತ ಹೊಂದಿದೆ. 15 ತಾಲೂಕು ಪಂಚಾಯಿತಿಗಳಲ್ಲಿ ಜೆಡಿಎಸ್ ಅಧಿಕಾರ ಪಡೆದಿದೆ ಎಂದು ದೇವೇಗೌಡರು ಮಾಹಿತಿ ನೀಡಿದರು.ಇದರಲ್ಲಿ ಇನ್ನಷ್ಟು ಓದಿ :