ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಚುನಾವಣೆ ವರ್ಷವಾಗಿದೆ. ಹೆಚ್ಚು ಹೆಚ್ಚು ಸಮಾವೇಶಗಳನ್ನು ಆಯೋಜಿಸಿ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಮುಖಂಡರಿಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖಡಕ್ ಸೂಚನೆ ನೀಡಿದ್ದಾರೆ. ಕೆಪಿಸಿಸಿ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಕಾರ್ಯಕ್ರಮಗಳ ಬಗ್ಗೆ ಪಟ್ಟಿ ಸಿದ್ದಪಡಿಸಿ. ಕಾರ್ಯಕ್ರಮಗಳ ಪಟ್ಟಿಯನ್ನು ನಮಗೆ ನೀಡಿ ಎಂದು ಸಲಹೆ ನೀಡಿದರು. ರಾಜ್ಯ ಸರಕಾರ ಜನಪರವಾದಂತಹ ಕೆಲಸ ಮಾಡುತ್ತಿದೆ. ಸರಕಾರದ ಸಾಧನೆಗಳನ್ನು ಕಾರ್ಯಕರ್ತರು