ಉತ್ತರಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ನಗರದ ಮಲ್ಲೇಶ್ವರಂ ಕಚೇರಿಯಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರೊಂದಿಗೆ ಮಾತನಾಡಿದ ಅವರು, ಚುನಾವಣೆ ತಂತ್ರಗಳನ್ನು ಪಕ್ಷದ ಹೈಕಮಾಂಡ್ ರೂಪಿಸುತ್ತದೆ ಎಂದು ತಿಳಿಸಿದ್ದಾರೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಶಾ, ಮುಂಬರುವ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಯಕರು ಒಗ್ಗಟ್ಟಿನಿಂದ ಹೋಗಬೇಕಾಗಿದೆ. ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ