ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ರೆ ಸಿಎಂ ಅಭ್ಯರ್ಥಿಯನ್ನುಘೋಷಿಸಲಿ ಎಂದು ಈಶ್ವರಪ್ಪ ಹಾಕಿದ ಸವಾಲಿಗೆ ಉತ್ತರಿಸಿದ ಅವರು, ಈಶ್ವರಪ್ಪ ಅವರ ಸವಾಲುಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಚುನಾವಣೆಗೆ ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಿಸುವುದು