ಮಳೆ ಕೊರತೆಯಿಂದಾಗಿ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಲು ಸೂಚಿಸಲಾಗಿದೆ. ಇದಕ್ಕೆ ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದು ಮೆ.ವ್ಯಾಟ್ ವಿದ್ಯುತ್ತನ್ನೂ ಉತ್ಪಾದನೆ