ದೇಶದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆಯಿಂದ ತುರ್ತು ಪರಿಸ್ಥಿತಿ ನಿರ್ಮಾಣಗೊಂಡಿದೆ. ಸಂವಿಧಾನ ವಿರೋಧಿಯಾಗಿ ಆಡಳಿತ ಮಾಡುತ್ತಿವೆ ಎಂದು ಸಮಾಜ ಪರಿವರ್ತನಾ ಆಂದೋಲನದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆರೋಪಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ದೇಶದಲ್ಲಿನ ಕೃಷಿ ಬಿಕ್ಕಟ್ಟು, ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಬಗ್ಗೆ ಕ್ರಮ ಜರುಗಿಸಬೇಕಾದ ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಒಬ್ಬರ ಮೇಲೊಬ್ಬರು ಆರೋಪಗಳು ಮಾಡುವ ಮೂಲಕ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿವೆ ಎಂದು ದೂರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ