ಬೆಂಗಳೂರು : ವಿಧಾನಮಂಡಲ ಅಧಿವೇಶನ ನಂತರ ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಪ್ರವಾಸ, ಜಿಲ್ಲಾವಾರು ಸಭೆ ಸೇರಿ ಹಲವು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಅಧಿವೇಶನದ ನಂತರ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ