ಬೆಂಗಳೂರು : ಇಂದು ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನರಿಗೆ ಸಿಎಂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಬಳಿಕ ನೌಕರರ ಮುಷ್ಕರದ ಬಗ್ಗೆ ಬಸವ ಕಲ್ಯಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಬ್ಬಹರಿದಿನಗಳಲ್ಲಿ ಈ ರೀತಿ ಮಾಡೋದು ಸರಿಯಿಲ್ಲ. ಹಠವನ್ನು ಬಿಟ್ಟು ಕೆಲಸಕ್ಕೆ ಹಾಜರಾಗಬೇಕು. ಕೆಲಸಕ್ಕೆ ಹಾಜರಾಗದವರಿಗೆ ಸಂಬಳ ಕೊಡಲ್ಲ ಎಂದು ಹೇಳಿದ್ದಾರೆ.ಸದ್ಯಕ್ಕೆ ಲಾಕ್ ಡೌನ್ ಇಲ್ಲ. ಏ.18, 19ಕ್ಕೆ ಸರ್ವಪಕ್ಷದ ಸಭೆ ಕರೆದಿದ್ದೇನೆ.