ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, *ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳ ಸೇರಿದಂತೆ ಒಟ್ಟು 4 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ. ದೊಡ್ಡಾನೆಕುಂದಿ ವಾರ್ಡ್ನ ಚಿನ್ನಪ್ಪನಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 3 ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಜಿ+2 ಕಟ್ಟಡವನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ. ಇನ್ನೆರಡು ಕಟ್ಟಡಗಳ ತೆರವು ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ನಾಳೆ ಬಾಕಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಿದೆ. ಇನ್ನು ಹೂಡಿ ವಾರ್ಡ್ ಸಾದರ