ಬೆಂಗಳೂರು: ಖಾತೆ ಬದಲಾವಣೆ ವಿಚಾರವಾಗಿ ಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸಿಎಂ ಭೇಟಿಯ ಬಳಿಕ ಆನಂದ್ ಸಿಂಗ್ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇಂದು ಬೆಳಿಗ್ಗೆ ಬಿಜೆಪಿ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಆನಂದ್ ಸಿಂಗ್ ಭೇಟಿ ಮಾಡಿದ್ದರು. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ತನಗೆ ನೀಡಲಾಗಿರುವ ಪರಿಸರ ಮತ್ತು ಪ್ರವಾಸೋದ್ಯಮ ಖಾತೆಯನ್ನು ಬದಲಿಸಬೇಕು