ಆಪದ್ಭಾಂಧವರಾಗಿ ಹೆಸರಾದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ್ ಶತಕದ ಜೊತೆಯಾಟದ ಮೂಲಕ ಎರಡನೇ ಟೆಸ್ಟ್ ಪಂದ್ಯದ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನವಾದ ಭಾನುವಾರ ಎರಡನೇ ಇನಿಂಗ್ಸ್ ನಲ್ಲಿ ಭಾರತ ಚಹಾ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿದೆ. ಒಂದು ಹಂತದಲ್ಲಿ ಭಾರತ 55 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಪೂಜಾರ