ಟೆಕ್ಕಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಮೃತ ಇಂದರ್ (33) ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ. ಭಾನುವಾರ ರಾತ್ರಿ ಅವರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮರುದಿನ ಬೆಳಿಗ್ಗೆ ತಂದೆ ಮಗನ ಕೊಠಡಿಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾಜರಾಜೇಶ್ವರಿ ನಗರ